ಪುತ್ತೂರಿನಿಂದ ಅವಕಾಶಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ ಪ್ರಸಾದ್ ಕೌಶಲ್ ಶೆಟ್ಟಿ, ಧನಂಜಯ ಅಡ್ಪಂಗಾಯ

0

ಪುತ್ತೂರು: 2023 ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷೆ ಉಳ್ಳವರು ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೇಯ ದಿನವಾದ ನ.15 ರಂದು ರಾಜ್ಯದ ಹಲವೆಡೆಯಿಂದ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದೆ.

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಅರ್ಜಿ ಸ್ವೀಕರಿಸಲಾಗಿದೆ. ಅರ್ಜಿ ಸಲ್ಲಿಸುವವರಿಂದ ಅರ್ಜಿಯ ಶುಲ್ಕ 5 ಸಾವಿರ ರೂ ಮತ್ತು 2 ಲಕ್ಷ ರೂಪಾಯಿಯ ಡಿ.ಡಿ. ಪಡೆಯಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆಗಿರುವ ಪುತ್ತೂರು ರಬ್ಬರ್ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಹಾಗೂ ಸುಳ್ಯದ ಧನಂಜಯ ಅಡ್ಪಂಗಾಯ ಅವರೂ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಧನಂಜಯ ಅಡ್ಪಂಗಾಯ ಅವರು ಈ ಹಿಂದೆ ಪುತ್ತೂರು ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಹಾಲಿ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ, ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಡಾ.ಕೃಪಾ ಅಮರ್ ಆಳ್ವ, ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ಡಾ. ದಿವ್ಯಪ್ರಭಾ ಚಿಲ್ತಡ್ಕ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್, ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಮತ್ತು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾಗಿರುವ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿರವರೂ ಕೆಪಿಸಿಸಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here