ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಮತ್ತು ಪುತ್ತೂರು ಹಾಗೂ ಕಡಬ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಇದರ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಕಾಯರ್ಪಾಡಿ ಹೇಳಿದರು.
ಅವರು ನ.16ರಂದು ಉಪ್ಪಿನಂಗಡಿಯಲ್ಲಿ ಸಂಘದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದರು. ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ಇದರ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕಾರ‍್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಸಹಕಾರಿ ಸಂಘದ ಕಚೇರಿಯಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಧ್ವಜಾರೋಹಣ ನಡೆಸಲಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು ಬೆಂಗಳೂರು ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ರಾಜಶೇಖರ ಜೈನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಯಸ್.ಬಿ. ಜಯರಾಮ ರೈ, ಬಿ. ನಿರಂಜನ್, ನಾರಾಯಣ ಪ್ರಕಾಶ್, ಶ್ರೀಮತಿ ಸಾವಿತ್ರಿ ರೈ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್, ಪುತ್ತೂರು ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ, ಪುತ್ತೂರು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ರೈ ಮೇನಾಲ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಎಂದು ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಿ. ಯಶವಂತ ಗೌಡ, ಜಗದೀಶ ರಾವ್ ಮಣಿಕ್ಕಳ, ರಾಮ ನಾಯ್ಕ್, ದಯಾನಂದ ಸರೋಳಿ, ಸುಜಾತ ರೈ, ಶ್ಯಾಮಲಾ ಶೆಣೈ, ಸಂಘದ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಉಪಸ್ಥಿತರಿದ್ದರು.