ನ.18-20: ವೀರಮಂಗಳ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರಾಯಶ್ಚಿತ ಕಾರ್ಯಕ್ರಮ

ಪುತ್ತೂರು:ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರಾರ್ಥವಾಗಿ ವಿವಿಧ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ನ.18 ರಿಂದ ಪ್ರಾರಂಭಗೊಂಡು 20 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ನ.18 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಗಣಪತಿ ಹೋಮ, ಸಂಸ್ಕಾರ ಮಂಗಳ ಹೋಮ, ಆಶ್ಲೇಷ ಬಲಿ, ಅಷ್ಠವಟು ಆರಾಧನೆ, ನಾಗತಂಬಿಲ ಸೇವೆ, ಮಂಗಳಾರತಿ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಮಹಾಸುದರ್ಶನ ಹೋಮ, ಪ್ರೇತವಾಹನೆ, ಬಾಧಾಕರ್ಷಣೆ, ಉಚ್ಚಾಟನೆ, ಕ್ಷೇತ್ರದ ರಕ್ಷೆಗೆ ವನದುರ್ಗಾ ಹೋಮ, ಹೋಮದ ಪೂರ್ಣಾಹುತಿ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.

ನ.19 ರಂದು ಸ್ವಸ್ತಿ ಪುಣ್ಯಾಹವಾಚನ, ತಿಲಹೋಮ, ಪವಮಾನ ಪ್ರಾಯಶ್ಚಿತ್ತ ಹೋಮ, ಗೋಪೂಜೆ, ದ್ವಾದಶಮೂರ್ತಿ ಆರಾಧನೆ, ವಿಷ್ಣು ಸಾಯುಜ್ಯ ಪೂಜೆ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ನ.20ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, ಪಂಚವಿಂಶತಿ, ಕಲಶಾಭಿಷೇಕ ಮಧ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.