ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗುರುಪ್ರಿಯಾ ನಾಯಕ್‌ರವರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಸನ್ಮಾನ

0

ಪುತ್ತೂರು: ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗುರುಪ್ರಿಯಾ ನಾಯಕ್‌ರವರಿಗೆ ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರು ಟೌನ್ ಬ್ಯಾಂಕ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜಗನ್ನಿವಾಸ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಪ್ರ.ಕಾರ್ಯದರ್ಶಿ ತ್ರಿವೇಣಿ ಪೆರ್‍ವೋಡಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ವಿಜಯಲಕ್ಷ್ಮೀ, ಸೇವಂತಿ ಶ್ರೀಯನ್, ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ನಗರ ಮಂಡಳ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ ನಾರಾಯಣ, ಪ್ರ.ಕಾರ್ಯದರ್ಶಿ ಯಶೋಧ ಕೆ ಗೌಡ, ಪ್ರಭಾವತಿ, ಜಯಂತಿ ನಾಯಕ್, ಜಿಲ್ಲಾ ಪದಾಧಿಕಾರಿಗಳು, ಜಿಲ್ಲೆಯ ೯ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here