ನ.19 ರಂದು ಕ.ರಾ.ರ.ಸಾ ನಿಗಮದ ಪುತ್ತೂರು ವಿಭಾಗದ ಬಸ್ಸುಗಳ ಕಾರ್ಯಚರಣೆಯಲ್ಲಿ ವ್ಯತ್ಯಯ

ಪುತ್ತೂರು: ನ.19 ರಂದು ಕ.ರಾ.ರ.ಸಾ ನಿಗಮದ ಪುತ್ತೂರು ವಿಭಾಗದ ಬಸ್ಸುಗಳ ಕಾರ್ಯಚರಣೆಯಲ್ಲಿ ವ್ಯತ್ಯಯವಾಗಲಿದೆ.

ನ.19 ರಂದು ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆಯನ್ನು ಮಂಗಳೂರು ನಗರದ ಭಾವುಟಗುಡ್ಡೆಯಲ್ಲಿ ಪ್ರತಿಷ್ಠಾಪಿಸಲಿದೆ ಹಾಗೂ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವವರಿದ್ದು ಸದರಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ ನಿಗಮದ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ.

ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದುದರಿಂದ ಸದರಿ ದಿನದಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುತ್ತದೆ. ಈ ದಿಶೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.