ಸಂಪ್ಯ ಆರೋಗ್ಯ ರಕ್ಷಾ ಸಮಿತಿಯಿಂದ ಖಂಡನೆ, ಎಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಗೆ ನಿರ್ಧಾರ
ಪುತ್ತೂರು:ಬದಿಯಡ್ಕದಲ್ಲಿ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿಯವರ ಅಸಹಜ ಸಾವು ಖಂಡಿಸಿ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿಯಿಂದ ನ.16 ರಂದು ಖಂಡನಾ ಸಭೆ ನಡೆಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸಹಾಯಕ ಆಯುಕ್ತ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಮಾಡುವುದಾಗಿ ನಿರ್ಧರಿಸಿದರು.
ಸಭೆಯನ್ನು ಉದ್ದೇಶಿಸಿ ಆರೋಗ್ಯ ರಕ್ಷಾ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಬದಿಯಡ್ಕದಲ್ಲಿ ವೈದ್ಯರಾಗಿದ್ದ ಕೃಷ್ಣಮೂರ್ತಿಯವರನ್ನು ಅಲ್ಲಿಂದ ಸ್ಥಳಾಂತರಗೊಳಿಸಬೇಕು, ಅಲ್ಲಿ ಅವರ ಸೇವೆಯನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಅವರನ್ನು ಕೊಲೆ ಮಾಡಲಾಗಿದೆ. ಅವರ ಜಾಗ ಹಾಗೂ ವೃತ್ತಿಯನ್ನು ಗುರಿಪಡಿಸಿಯೇ ವ್ಯವಸ್ಥಿತವಾಗಿ ಹತ್ಯೆ ಮಾಡಲಾಗಿದೆ ಎಂದು ಸಾಮಾಜಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಯಾವುದೇ ಹಿಂದುವಿಗೆ ಅನ್ಯಾಯವಾದರೆ ಇಡೀ ಸಮಾಜವೇ ಅವರ ಹಿಂದೆ ನಿಲ್ಲಲಿದೆ. ಹೀಗಾಗಿ ಸಹಾಯಕ ಆಯುಕ್ತರ ಮೂಲಕ ಸರಕಾರವನ್ನು ಎಚ್ಚರಿಸಲಾಗುವುದು. ಜಿಹಾದಿಗಳ ಇಂತಹ ಘಟನೆ ಮತ್ತೆ ಮರುಕಳಿಸಬಾರದು. ಇದಕ್ಕಾಗಿ ಜಿಹಾದಿಗಳ ಜೊತೆಗಿನ ವ್ಯವಹಾರ, ಸಂಪರ್ಕಗೊಳಿಸುವ ಮೂಲಕ ಹಿಂದು ಸಮಾಜ ಶಕ್ತವಾಗಬೇಕಿದೆ ಎಂದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಉತ್ತಮ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿಯವರಿಗೆ ಕೆಲವು ತಿಂಗಳುಗಳಿಂದ ಕಿರುಕುಲ ನೀಡಿ ಅವರ ಜಾಗವನ್ನು ವಶಪಡಿಸಿಕೊಂಡು, ಅಲ್ಲಿ ಮುಸಲ್ಮಾನ ಸಮುದಾಯದ ವೈದ್ಯರಿಗೆ ನೀಡುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದರು. ಹಿಂದುಗಳಾದ ನಾವೆಲ್ಲರೂ ಸಂಘಟಿತರಾಗಬೇಕಾದ ಸಮಯ ಬಂದಿದೆ. ನಾವೆಲ್ಲ ಧೈರ್ಯದಿಂದ ಎದುರಿಸಬೇಕಾಗಿದೆ. ಅಲ್ಪಸಂಖ್ಯಾತರೆನಿಸಿಕೊಂಡವರು ಬಹುಸಂಖ್ಯಾತರ ಮೇಲೆ ಸವಾರಿ ಮಾಡುತ್ತಿದ್ದು ಇಂದು ಮಿತಿ ಮೀರಿದೆ. ಇಡೀ ಹಿಂದು ಸಮಾಜ ಒಗ್ಗಟ್ಟಿನಿಂದ ಎದುರಿಸಬೇಕಾಗಿದೆ ಎಂದರು.
ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ ರೈ ಇಳಂತಾಜೆ, ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಮಂಜಪ್ಪ ಗೌಡ ಬೈಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ, ಸಹಾಯಕ ಆಯುಕ್ತರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಮಾಡುವುದಾಗಿ ನಿರ್ಧರಿಸಲಾಗಿದೆ.
ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉದಯ ಕುಮಾರ್ ಎಸ್ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರು, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ನವಚೇತನಾ ಯುವಕ ಮಂಡಲ, ಸತ್ಯನಾರಾಯಣ ಪೂಜಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿದ್ದರು.