ನ.19: ಸಿಎಂ ಬೊಮ್ಮಾಯಿ ಮಂಗಳೂರಿಗೆ

0

ಮಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.19ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. 11 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here