ನೆಲ್ಯಾಡಿ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಸಕ್ತಿ ಇರುವವರು ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪರಿಶಿಷ್ಠ ಜಾತಿ ಮೀಸಲು ಕ್ಷೇತ್ರವಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಜಿ.ಕೃಷ್ಣಪ್ಪ ಅವರು ಕೆಪಿಸಿಸಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಜಿ.ಕೃಷ್ಣಪ್ಪ ಅವರು ರಾಮಕುಂಜ ಗ್ರಾಮದಲ್ಲಿ ವಾಸವಾಗಿದ್ದು ಅಲ್ಲಿನ ಮತದಾರರಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರು, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಪರಿಶಿಷ್ಠ ಜಾತಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಬಯಸಿ ಶುಲ್ಕ ಪಾವತಿಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.