-ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿ ಸಂಪ್ಯ ಆರೋಗ್ಯ ರಕ್ಷಾ ಸಮಿತಿಯಿಂದ ಮನವಿ
ಪುತ್ತೂರು:ಬದಿಯಡ್ಕದಲ್ಲಿ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿಯವರ ಅಸಹಜ ಸಾವು ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿಯಿಂದ ನ.16 ರಂದು ಸಹಾಯಕ ಆಯುಕ್ತರ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದರು.
ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸದಸ್ಯ ಲಕ್ಷ್ಮಣ್ ಬೈಲಾಡಿ, ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್., ಮುಕ್ರಂಪಾಡಿ ಸತ್ಯನಾರಾಯಣ ಪೂಜಾ ಸಮಿತಿಯ ಹರಿಣಾಕ್ಷ ಮುಕ್ರಂಪಾಡಿ ಉಪಸ್ಥಿತರಿದ್ದರು.