ಪ್ರಬಂಧ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿಯ ವಿದ್ಯಾರ್ಥಿ ಉತ್ತಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರಿನಲ್ಲಿ ನಡೆಸಿದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿ ಉತ್ತಮ್.ಜಿ. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶ್ಲೋಕ ಕಂಠಪಾಠದಲ್ಲಿ ರಚನಾ ವಿ 10ನೇ ತರಗತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರನ್ನು ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ. ಎಂ. ಬಿ , ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ. ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here