ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆ: ಸಿ.ಎಂ.ಬೊಮ್ಮಾಯಿ ಭಾಗಿ

0

ಮಂಗಳೂರು: ದ.ಕ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರಪಾಲಿಕೆ ಹಾಗೂ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವರು ಭಾಗವಹಿಸಿದ್ದಾರೆ.

ಸಭಾ ಕಾರ್ಯಕ್ರಮ  ಮಂಗಳೂರು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿದ್ದು ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ನೆರವೇರಿಸಿದರು..

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದು ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಸಹಿತ ಹಲವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here