ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮುಷ್ಠಿ ಕಾಣಿಕೆ, ಸಾಮೂಹಿಕ ಪ್ರಾರ್ಥನೆ, ಮೃತ್ಯುಂಜಯ ಹೋಮ, ದುರ್ಗಾಪೂಜೆ

ಆಲಂಕಾರು: ಸೀಮಾ ದೇವಸ್ಥಾನ ಶ್ರೀಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಹಾಗು ಬ್ರಹ್ಮಕಲಶದ ಉದ್ದೇಶದಿಂದ ವೇ.ಮೂ ನರಸಿಂಹ ತಂತ್ರಿಯವರ ಮಾರ್ಗದರ್ಶನದಲ್ಲಿ ದೈವಜ್ಞ ವಳಕುಂಜ ವೆಂಕಟ್ರರಮಣ ಭಟ್‌ರವರ ನೇತೃತ್ವದಲ್ಲಿ ನಡೆದ ಅಷ್ಡಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷದ ಪರಿಹಾರ್ಥವಾಗಿ ನ.18ರಂದು ಶ್ರೀಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.

ಈ ದೇವಸ್ಥಾನವು ಆಲಂಕಾರು, ಪೆರಾಬೆ, ಕುಂತೂರು, ಹಳೆನೇರೆಂಕಿ, ರಾಮಕುಂಜ, ಕೊಯಿಲ, ಬಲ್ಯ, ಬಜತ್ತೂರು ಎಂಟು ಗ್ರಾಮಗಳ ಸೀಮಾ ದೇವಸ್ಥಾನವೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದಿತ್ತು.

ಬೆಳಿಗ್ಗೆ ಗಣಪತಿ ಹೋಮ, ಮೃತ್ಯುಂಜಯ ಹೋಮ, ಪವಮಾನ ಅಭಿಷೇಕ, ಸೀಮೆಯ ಎಂಟು ಗ್ರಾಮಗಳ ಪ್ರತಿ ಮನೆಯ ಭಕ್ತಾದಿಗಳಿಂದ ಮುಷ್ಠಿ ಕಾಣಿಕೆ ಸಮರ್ಪಣೆ, ಸಾಮೂಹಿಕ ಪ್ರಾರ್ಥನೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದುರ್ಗಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಆಲಂಕಾರು ಮಯೂರ ಸಾಂಸ್ಕೃತಿಕ ಕಲಾ ಕೇಂದ್ರದ ಮಕ್ಕಳಿಂದ ಯಕ್ಷಗಾನ ನಡೆಯಿತು. ಈ ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗು ಸದಸ್ಯರು, ಸಿಬ್ಬಂದಿ ವರ್ಗದವರು ಹಾಗು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.