ಲಿಟ್ಲ್ ಫ್ಲವರ್ ಶಾಲೆಯ ಕಬಡ್ಡಿ ತಂಡದ ದೀಕ್ಷಾ ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು; ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಂಜ ಇದರ ಸಹಯೋಗದಿಂದ ನವೆಂಬರ್ 18 ಮತ್ತು 19 ರಂದು ನಡೆದ ಮೈಸೂರು ವಿಭಾಗ ಮಟ್ಟದ 14 ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆಯ ಬಾಲಕಿಯರ ಕಬಡ್ಡಿ ತಂಡದ ದೀಕ್ಷಾ ಎಸ್ ರವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನ.21 ಮತ್ತು 22 ರಂದು ನಡೆಯುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಶಾಲಾ ಸಹಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here