ಕೊಂಬೆಟ್ಟು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ೨೦೨೨-೨೩ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನ.೧೯ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.



ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿ ನಮ್ಮ ಸಂಸ್ಥೆಗೆ ಹೆಸರು ತರುವಲ್ಲಿ ಪ್ರಯತ್ನಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲ ಸುರೇಶ್ ಎನ್.ಕೆ., ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಶಂಕರ ನಾರಾಯಣ ಭಟ್ , ಅಶೋಕ್ ನಾಕ್ , ಶ್ರೀಮತಿ ಸುಚಿತ್ರ , ಶ್ರೀಮತಿ ಸವಿತಾ, ಜಯಪ್ರಕಾಶ್, ಶ್ರೀಮತಿ ಸಂಧ್ಯಾ , ಶ್ರೀಮತಿ ಶೋಭಾ ವಿಲ್ಮಾ ವೇಗಸ್, ನಿವೃತ್ತ ಉಪನ್ಯಾಸಕ ದೇವದಾಸ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಗೌಡ ಉಪಸ್ಥಿತರಿದ್ದರು ಎನ್.ಸಿ.ಸಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.

ವಾರ್ಷಿಕ ಕ್ರೀಡಾಕೂಟದ ಎಲ್ಲಾ ಬಹುಮಾನಗಳ ಸಮಗ್ರ ಪ್ರಶಸ್ತಿಗಳ ಪ್ರಾಯೋಜಕತ್ವವನ್ನು ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು, ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಜಾನೆಟ್ ಪಾಸ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸ್ಮಿತಾ ವಂದಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಮಮತಾ ರೈ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ವಾರ್ಷಿಕ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here