ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪರಿಹಾರ ಅಂಗವಾಗಿ ಹವನಾದಿಗಳು

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿರುವ ದೋಷ ಪರಿಹಾರವಾಗಿ ಹಲವು ಪ್ರಾಯಶ್ಚಿತ ಕಾರ್ಯಗಳು ನಡೆಯುತ್ತಿದ್ದು, ನ.೧೯ರಂದು ಸುಕೃತ ಹವನ, ಗೋಮೂಲ್ಯ ದಾನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ, ಪವಮಾನ ಹವನ, ಚಕ್ರಾಟ್ಟ ಪೂಜೆ, ದಶಾಂಶ ಹವನ, ದ್ವಾದಶ ಮೂರ್ತಿ ಆರಾಧನೆ ಕಾರ್ಯಕ್ರಮ ನಡೆಯಿತು.


ದೇವಳದ ತಂತ್ರಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಪರಿಹಾರ ಕಾರ್ಯಕ್ರಮ ನಡೆಯಿತು. ಬೆಳಗ್ಗಿನಿಂದ ಮಧ್ಯಾಹ್ನದ ತನಕ ಹವನಾದಿಗಳು ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ಶೇಖರ್ ನಾರಾವಿ, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು,ಬಿ.ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್ ರಾವ್, ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಹಲವಾರು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here