




ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಮತ್ತು ಪುತ್ತೂರು ಹಾಗೂ ಕಡಬ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಆರಂಭವಾಗಿದ್ದು, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.









ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯ ನೇತ್ರಾವತಿ ಸಮುದಾಯ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿಯದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ನಿರ್ದೇಶಕ ರಾಜಶೇಖರ ಜೈನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ರಾದ ಬಿ. ನಿರಂಜನ್, ಸಾವಿತ್ರಿ ರೈ, ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್ ಅಧ್ಯಕ್ಷ ಕೃಷ್ಣಕುಮಾರ್ ರೈ, ಸಹಕಾರಿ ಯೂನಿಯನ್ ಪುತ್ತೂರು ಇದರ ಅಧ್ಯಕ್ಷ ಪ್ರವೀಣ್ ರೈ ಮೇನಾಲ ಉಪಸ್ಥಿತರಿದ್ದರು. ಉಪ್ಪಿನಂಗಡಿ ಸಿಎ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ನ ಅಧ್ಯಕ್ಷ ಶಂಕರನಾರಾಯಣ ಖಂಡಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಆರ್ಥಿಕ ಸೇರ್ಪಡೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಡಿಜಿಟಲೀಕರಣ ಮತ್ತು ಸಹಕಾರಿ ಸಂಸ್ಥೆಗಳ ದತ್ತಾಂಶವನ್ನು ಬಲಪಡಿಸುವುದು” ವಿಷಯವಾಗಿ ಮಾತನಾಡಿದರು.
ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಗೋವಿಂದ ಪ್ರಸಾದ್ ಕಜೆ ಕಾರ್ಯಕ್ರಮ ನಿರೂಪಿಸಿದರು.







