ಉಪ್ಪಿನಂಗಡಿಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ-2022

0

ಕಟ್ಟ ಕಡೆಯ ವ್ಯಕ್ತಿಯೂ ಸಹಕಾರಿ ಸಂಸ್ಥೆಯಲ್ಲಿ ತೊಡಗಿಸಿಕೊಳುವಂತಾಗಬೇಕು-ಡಾ. ಎಂ.ಎನ್. ರಾಜೇಂದ್ರ ಕುಮಾರ್.

೦ ರೈತರ ಅನುಕೂಲತೆಗಾಗಿ ಸರಕಾರದಿಂದ ವಿವಿಧ ಯೋಜನೆ ಜಾರಿ-ಮಠಂದೂರು.

೦ ಸಹಕಾರಿ ಸಂಸ್ಥೆಯ ಹುಟ್ಟು ಆರ್ಥಿಕ ಸಾಕ್ಷರತೆಯನ್ನು ತಿಳಿಸಿಕೊಟ್ಟಿದೆ -ಶಂಕರ ನಾರಾಯಣ ಖಂಡಿಗೆ

೦ ಸಹಕಾರಿ ಕ್ಷೇತ್ರದ ವಿಚಾರಧಾರೆಯನ್ನು ಪಠ್ಯ ಪುಸ್ತಕದಲ್ಲಿ ಸೇರ್ಪಡೆಗೊಳಿಸಬೇಕು-ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ

೦ ಸಂಘದ ಅಮೃತ ಮಹೋತ್ಸವಕ್ಕೆ ಇನ್ನಷ್ಟು ಮೆರಗು ನೀಡಿದೆ-ಕೆ.ವಿ. ಪ್ರಸಾದ್ ಕಾಯರ್ಪಾಡಿ.

ಉಪ್ಪಿನಂಗಡಿ: ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಗಳಾಗಿದ್ದರೂ ದೇಶದ ಒಟ್ಟು ಜನ ಸಂಖ್ಯೆಯಲ್ಲಿ ಕೇವಲ 30 ಕೋಟಿಯಷ್ಟು ಜನರು ಮಾತ್ರ ಸಹಕಾರಿ ವ್ಯವಸ್ಥೆಗೆ ಒಳಗಾಗಿದ್ದು, ಉಳಿದ ಬಹು ದೊಡ್ಡ ಭಾಗದ ಜನಕ್ಕೆ ಇನ್ನೂ ಸಹಕಾರಿ ತತ್ವ ತಲುಪಿಲ್ಲ. ಈ ದಿಶೆಯಲ್ಲಿ ದೇಶದ ಕಟ್ಟ ಕಡೆಯ ವ್ಯಕ್ತಿಯನ್ನೂ ಒಳಗೊಂಡಂತೆ ಸಹಕಾರಿ ಸಂಸ್ಥೆಗಳು ಬೆಳೆಯುವಂತೆ ಮಾಡುವುದೇ ಸಹಕಾರಿ ಸಪ್ತಾಹದ ಮೂಲ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಬಿರುದಾಂಕಿತ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ನ. 20ರಂದು ಉಪ್ಪಿನಂಗಡಿಯ ನೇತ್ರಾವತಿ ಸಮುದಾಯ ಭವನದಲ್ಲಿ ಆಯೋಜಿಸಲ್ಪಟ್ಟ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022ರ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಸಂಘಗಳು 20 ವರ್ಷಗಳ ಹಿಂದೆಯೇ ಗಣಕೀಕೃತ ವ್ಯವಸ್ಥೆಯನ್ನು ಅಳವಡಿಸಿದ್ದು, ಕೃಷಿ ಸಾಲ ಮರುಪಾವತಿಯಲ್ಲೂ ಶೇಕಡಾ 100ರ ಪ್ರಗತಿಯನ್ನು ಸಾದಿಸಿಕೊಂಡು ಬಂದಿದೆ. ದೇಶದ ವಾಣಿಜ್ಯ ಬ್ಯಾಂಕುಗಳು ಭಾಷೆ ತಿಳಿಯದ ಸಿಬ್ಬಂದಿಗಳನ್ನು ನೇಮಿಸುವ ಮೂಲಕ ಗ್ರಾಹಕರಿಂದ ವಿಮುಖವಾಗುತ್ತಿದ್ದರೆ, ಸಹಕಾರಿ ಸಂಸ್ಥೆಗಳು ಸ್ಥಳೀಯ ಸಿಬ್ಬಂದಿಗಳೊಂದಿಗೆ ಜನ ಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸಕ್ತ ಕೇಂದ್ರ ಸರಕಾರ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಸಮರ್ಥ ಸಚಿವರ ನೇತೃತ್ವದಲ್ಲಿ ಸಹಕಾರ ಸಚಿವಾಲಯವನ್ನೇ ತೆರೆದಿದೆ. ರೈತರ ಆರೋಗ್ಯ ರಕ್ಷಣೆಗೆ ಅನುಕೂಲ ಕಲ್ಪಿಸುವ ಸಲುವಾಗಿ ಯಶಸ್ವಿನಿ ಯೋಜನೆಯನ್ನು ಪುನಃ ಜಾರಿಗೊಳಿಸಿದೆ. ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಹೈನುಗಾರರ ಉನ್ನತಿಗೆ ಯೋಜನೆ ರೂಪಿಸಲಾಗಿದೆ. ಒಟ್ಟಾರೆ ರೈತರ ಅನುಕೂಲತೆಗಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಸಹಕಾರ ತತ್ವದಡಿ ಅದೆಲ್ಲವೂ ರೈತರನ್ನು ತಲುಪಲಿದೆ ಎಂದರು.

ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸಹಕಾರಿ ಸಂಸ್ಥೆ ಸಮಾನತೆಯ ಹಾದಿಯನ್ನು ತೋರಿಸಿಕೊಟ್ಟಿದೆ. ಅದಾಗ್ಯೂ ಹಿಂದೆಲ್ಲಾ ರೈತರು ವಸ್ತುಗಳ ರೂಪದಲ್ಲಿ ಸಾಲ ವ್ಯವಹಾರ ನಡೆಯುತ್ತಿತ್ತು. ಆದರೆ ಸಹಕಾರಿ ಸಂಸ್ಥೆಯ ಹುಟ್ಟು ಆರ್ಥಿಕ ಸಾಕ್ಷರತೆಯನ್ನು ತಿಳಿಸಿಕೊಟ್ಟಿದ್ದು, ಮೌಲ್ಯವರ್ಧಿತ ಸೇವೆಯ ಮೂಲಕ ಸಂಘದ ಅಭಿವೃದ್ಧಿ ಹೊಂದುತ್ತಿದೆ ಎಂದರು.

ಸಪ್ತಾಹದ ಧ್ವಜಾರೋಹಣ ನೆರವೇರಿಸಿದ ದ.ಕ. ಜಿಲ್ಲಾ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ ಸಹಕಾರಿ ಕ್ಷೇತ್ರದ ಹುಟ್ಟು, ಸಾಧನೆ, ಬೆಳವಣಿಗೆಯ ವಿಚಾರಧಾರೆಯನ್ನು ಪಠ್ಯ ಪುಸ್ತಕದಲ್ಲಿ ಸೇರ್ಪಡೆಗೊಳಿಸಬೇಕು, ಆ ಮೂಲಕ ಸಹಕಾರಿ ಕ್ಷೇತ್ರದ ಬಗ್ಗೆ ಯುವಕರಿಗೆ. ಮಹಿಳಿಯರಿಗೆ ಅರಿವು ಮೂಡುವಂತೆ ಮಾಡಬೇಕು ಎಂದ ಅವರು ಸಹಕಾರಿ ಕ್ಷೇತ್ರ ಕೇವಲ ಕೃಷಿಕರಿಗೆ ಮಾತ್ರ ಸೀಮಿತವಾಗಬಾರದು, ಈ ಮೂಲಕ ಬೇರೆ ಸಹಕಾರಿ ಸಂಘಗಳಿಗೂ ಸಹಕಾರಿ ಆಗಬೇಕು ಎಂದರು.
ಉಪ್ಪಿನಂಗಡಿ ಸಹಕಾರಿ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಕಾಯರ್ಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಸಂಸ್ಥೆಯ ೭೫ನೇ ಸಂಭ್ರಮ ಸಂದರ್ಭದಲ್ಲಿ ವರ್ಷಪೂರ್ತಿ ಕಾರ್‍ಯಕ್ರಮ ಆಯೋಜಿಸಿದ್ದೇವೆ, ಅದರ ಇನ್ನೊಂದು ಭಾಗ ಎನ್ನುವಂತೆ ಸಪ್ತಾಹದ ಸಮಾರೋಪ ನಮ್ಮ ಪಾಲಿಗೆ ದೊರಕಿರುವುದು ತುಂಬಾ ಸಂತೋಷವನ್ನು ಉಂಟು ಮಾಡಿದೆ ಮತ್ತು ನಮ್ಮ ಅಮೃತ ಮಹೋತ್ಸವಕ್ಕೆ ಇನ್ನಷ್ಟು ಮೆರಗು ನೀಡಿದೆ ಎಂದರು.


ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು ಬೆಂಗಳೂರು ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ರಾಜಶೇಖರ ಜೈನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಬಿ. ನಿರಂಜನ್, ಶ್ರೀಮತಿ ಸಾವಿತ್ರಿ ರೈ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್, ಪುತ್ತೂರು ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ, ಪುತ್ತೂರು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ರೈ ಮೇನಾಲ, ಉಪ್ಪಿನಂಗಡಿ ಸಹಕಾರಿ ಸಂಘದ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್‍ಯಕ್ರಮದಲ್ಲಿ ಮುಂಡೂರು ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಕೆದಂಬಾಡಿ ಸಹಕಾರಿ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಳ, ಕೊಳ್ತಿಗೆಯ ಅಧ್ಯಕ್ಷ ವಸಂತ ಕುಮಾರ್ ರೈ ದುಗ್ಗಲ, ಬನ್ನೂರು ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸವಣೂರು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಆರ್ಯಾಪು ಸಂಘದ ಅಧ್ಯಕ್ಷ ಹೆಚ್. ಮಹಮ್ಮದ್ ಆಲಿ, ಕಡಬ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಬಿಳಿನೆಲೆ ಸಂಘದ ಅಧ್ಯಕ್ಷ ದಾಮೋದರ ಗೌಡ, ಎಡಮಂಗಲ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಆಲಂಕಾರು ಸಂಘದ ಉಪಾಧ್ಯಕ್ಷ ಪ್ರವೀಣ್ ರೈ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾವ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯ ಜಯಂತ ಪೊರೋಳಿ,ಉಪ್ಪಿನಂಗಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪೆಲಪ್ಪಾಡು ವೆಂಕಟರಮಣ ಭಟ್, ಮಾಜಿ ನಿರ್ದೇಶಕರಾದ ರಾಮಚಂದ್ರ ಮಣಿಯಾಣಿ, ಅಜೀಝ್ ಬಸ್ತಿಕ್ಕಾರ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಅತ್ರಮಜಲು, ಲೋಕೇಶ್ ಬೆತ್ತೋಡಿ, ವಿಜಯಕುಮಾರ್ ಕಲ್ಲಿಕೆ, ಕೈಲಾರ್ ರಾಜ್‌ಗೋಪಾಲ ಭಟ್, ಯು. ರಾಮ, ಹರಿರಾಮಚಂದ್ರ, ಉಮೇಶ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.



ಅಭಿನಂಧನೆ:
ಕಾರ್‍ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಭಾವೈಕ್ಯ ರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದ, ಸುದ್ದಿ ಬಿಡುಗಡೆ ಪತ್ರಿಕೆ ಪರಿಕಲ್ಪನೆಯ ಲಂಚ ರಹಿತ ಉತ್ತಮ ಸೇವೆಗೆ ನೀಡುತ್ತಿರುವ
ಅಧಿಕಾರಿಯಾಗಿ ಅಭಿನಂಧನೆ ಸ್ವೀಕರಿಸಿರುವ ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಅಶೋಕ್ ಅವರನ್ನು ಅಭಿನಂಧಿಸಲಾಯಿತು.


ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು ವಂದಿಸಿದರು. ಶ್ರಾವ್ಯ ಕೆ. ಪ್ರಾರ್ಥನೆ ಹಾಡಿದರು. ನಿರ್ದೇಶಕರಾದ ಜಿ. ಯಶವಂತ ಗೌಡ, ಜಗದೀಶ ರಾವ್ ಮಣಿಕ್ಕಳ, ರಾಮ ನಾಯ್ಕ್, ದಯಾನಂದ ಸರೋಳಿ, ಶ್ರೀಮತಿ ಸುಜಾತ ರೈ, ಶ್ಯಾಮಲಾ ಶೆಣೈ, ಸಚಿನ್, ಶರತ್, ಕುಂಞ, ರಾಜೇಶ್, ಸಿಬ್ಬಂದಿಗಳದ ಪುಪ್ಪರಾಜ್ ಶೆಟ್ಟಿ, ಪ್ರವೀಣ್ ಆಳ್ವ, ಶಶಿಧರ ಹೆಗ್ಡೆ, ಶೋಭಾ ವಿವಿಧ ಕಾರ್‍ಯಕ್ರಮ ನಿರ್ವಹಿಸಿದರು. ಡಾ. ಗೋವಿಂದ ಪ್ರಸಾದ್ ಕಜೆ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here