ದರ್ಬೆ ಲಿಟ್ಲ್‌ಫ್ಲವರ್ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

0

ಪುತ್ತೂರು: ತಾಲ್ಲೂಕಿನ ಶಿಕ್ಷಣ ಕ್ಷೇತ್ರದಲ್ಲಿ 94 ವರುಷಗಳ ಇತಿಹಾಸ ಹೊಂದಿರುವ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನ. 12 ರಂದು ಸಂಜೆ ಶಾಲಾ ಆವರಣದಲ್ಲಿ ನಡೆಯಿತು.

ಬೆಥನಿ ಶಿಕ್ಷಣ ಮಂಡಳಿಯ ಕಾರ್ಪೊರೇಟ್ ಮ್ಯಾನೇಜರ್ ಭಗಿನಿ ಸಿಸಿಲಿಯ ಮೆಂಡೋನ್ಸರವರು ಅಧ್ಯಕ್ಷತೆಯನ್ನು ವಹಿಸಿ, ದೀಪ ಬೆಳಗಿಸಿ ಮಾತನಾಡಿ ‘ಹಿರಿಯ ವಿದ್ಯಾರ್ಥಿಗಳನ್ನು ಮತ್ತೆ ನಮ್ಮ ಸಂಸ್ಥೆ ಜೊತೆ ಜೋಡಿಸಿ, ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿ ಕನ್ನಡ ಮಾಧ್ಯಮ ಶಾಲೆಯನ್ನು ಶೈಕ್ಷಣಿಕ ಗುಣಮಟ್ಟದ ದೃಷ್ಟಿಯೊಂದಿಗೆ ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಸಾಗಲು ಈ ಕಾರ್ಯಕ್ರಮ ಮುನ್ನುಡಿಯಾಗಲಿ’ ಎಂದರು.

ವೇದಿಕೆಯಲ್ಲಿ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್., ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ನಿವೃತ್ತ ಶಿಕ್ಷಕಿಯರಾದ ದೋರತಿ ಮೇರಿ ಡಿಸೋಜಾ, ರೋಜ್ಲಿನ್ ಡಿಸಿಲ್ವ, ಐರಿಸ್ ರೆಬೆಲ್ಲೋ, ಸಬೀನಾ ಲಸ್ರಾದೋ, ಪ್ರೆಸ್ಸಿ ಲೋಬೋ, ರಕ್ಷಕ ಶಿಕ್ಷಕ ಸಂಫದ ಸದಸ್ಯರಾದ ಸತೀಶ್ ಆರ್., ಪ್ರಿಯ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳ ಪರವಾಗಿ ಬಜಾಜ್ ಫೈನಾನ್ಸ್ ಪ್ರಾದೇಶಿಕ ವಿಭಾಗದ ಮಂಗಳೂರು ಪ್ರಬಂಧಕರಾದ ಪ್ರದೀಪ್ ಮಾತನಾಡಿ ಕಾರ್ಯಕ್ರಮದ ಆಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 100 ಕ್ಕಿಂತ ಅಧಿಕ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಸಲಹೆ ಸೂಚನೆ ನೀಡಿದರು.

ಶಾಲಾ ಶಿಕ್ಷಕ ವೃಂದ ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್.‌ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ ಪ್ರಸ್ತಾಪಿಸಿದರು‌. ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡೀಸ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here