





ಪುತ್ತೂರು: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಅರಿಯಡ್ಕ ಇದರ ಪುನರ್ ನಿರ್ಮಿತ ಭಜನಾ ಮಂದಿರ ಹಾಗೂ ಶ್ರೀ ಕೃಷ್ಣ ಸಭಾ ಭವನ ಹಾಗೂ ಭಜನಾ ಮಂಗಳೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನ20 ರಂದು ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಬಿಡುಗಡೆ ಮಾಡಿ ಶುಭ ಹಾರೈಸಿದರು.


ವೇದಿಕೆಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ರಾಮದಾಸ್ ರೈ ಮದ್ಲ, ಭಜನಾ ಸಂಕೀರ್ತನೆ ಸಮಿತಿ ಗೌರವಾಧ್ಯಕ್ಷ ಸದಾಶಿವ ಮಣಿಯಾಣಿ ಕುತ್ಯಾಡಿ, ಅಧ್ಯಕ್ಷ ವಿಶ್ವನಾಥ ರೈ ಕುತ್ಯಾಡಿ, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ರೈ ಅಮೈ, ಉಪಾಧ್ಯಕ್ಷ ಶ್ರೀ ಹರಿ ಭಟ್ ಕುತ್ಯಾಡಿ, ಉಪಸ್ಥಿತರಿದ್ದು ಶುಭ ಹಾರೈಸಿದರು.ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು.





ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಜೀರ್ಣೋದ್ದಾರ ಸಮಿತಿ ಸದಸ್ಯರು, ಭಜನಾ ಸಂಕೀರ್ತನೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕುತ್ಯಾಡಿ ಸ್ವಾಗತಿಸಿ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಸಂತೋಷ್ ಮಣಿಯಾಣಿ ಕುತ್ಯಾಡಿ ವಂದಿಸಿದರು.ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ ಕಾರ್ಯಕ್ರಮ ನಿರೂಪಿಸಿದರು.









