ನ.23: ಮರೀಲು ಸೆಕ್ರೇಡ್ ಹಾರ್ಟ್ ಚರ್ಚ್‌ನ ವಾರ್ಷಿಕ ಮಹೋತ್ಸವ

ಪುತ್ತೂರು: ನಗರದ ಹೊರ ವಲಯದಲ್ಲಿರುವ ಮರೀಲು ಸೆಕ್ರೇಡ್ ಹಾರ್ಟ್ ಚರ್ಚ್‌ನಲ್ಲಿ ನ.23 ರಂದು ಚರ್ಚ್‌ನ ವಾರ್ಷಿಕ ಮಹೋತ್ಸವ(ಸಾಂತ್‌ಮಾರಿ)ವು ಸಂಭ್ರಮದಿಂದ ಜರಗಲಿದೆ.

ಹಬ್ಬದ ಪ್ರಧಾನ ದಿವ್ಯ ಬಲಿಪೂಜೆಯನ್ನು ಪುತ್ತೂರು ವಲಯ ಚರ್ಚ್‌ಗಳ ಪ್ರಧಾನ ಧರ್ಮಗುರು ಹಾಗೂ ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ನೆರವೇರಿಸಲಿದ್ದಾರೆ.

ಬಲಿಪೂಜೆಯಲ್ಲಿ ಚರ್ಚ್‌ನ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ವಂ|ಕೆವಿನ್ ಲಾರೆನ್ಸ್ ಡಿ’ಸೋಜ, ಧರ್ಮಗುರುಗಳಾದ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೋ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಬನ್ನೂರು ಸಂತ ಅಂತೋನಿ ಚರ್ಚ್ ಧರ್ಮಗುರು ವಂ|ಪ್ರಶಾಂತ್ ಫೆರ್ನಾಂಡೀಸ್, ಮುಕ್ರಂಪಾಡಿ ಸಾಂತೋಮ್ ಗುರುಮಂದಿರದ ಧರ್ಮಗುರುಗಳು ಅಲ್ಲದೆ ಪುತ್ತೂರು ವಲಯದ ಚರ್ಚ್‌ಗಳ ಧರ್ಮಗುರುಗಳು, ಧರ್ಮಭಗಿನಿಯರು, ಚರ್ಚ್‌ನ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಚರ್ಚ್‌ನ 19ವಾಳೆಯ ಗುರಿಕಾರರು, ಪ್ರತಿನಿಧಿಗಳು ಹಾಗೂ ಕ್ರೈಸ್ತ ಬಾಂಧವರು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮರೀಲ್ ಸೆಕ್ರೇಡ್ ಹಾರ್ಟ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ವಲೇರಿಯನ್ ಫ್ರ್ಯಾಂಕ್, ಪಾಲನಾ ಮಂಡಳಿಯ ಉಪಾಧ್ಯಕ್ಷ ಜೋನ್ ಸಿರಿಲ್ ರೊಡ್ರಿಗಸ್, ಕಾರ್ಯದರ್ಶಿ ನ್ಯಾನ್ಸಿ ಮಾಡ್ತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.