ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

0

ಪುತ್ತೂರು : ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23ರವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್ ಭಟ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರು ವಿಟ್ಲದ ರಾಜೇಶ್ ಭಟ್ ಮತ್ತು ರಾಧಿಕಾ ಭಟ್ ದಂಪತಿ ಪುತ್ರ.

ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಕಬಕದ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ.

4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ರಜತ್ ಆರ್ ಭಟ್, ಪವನ್ ಕುಮಾರ್, ಪ್ರಮಥ್ ರೈ ಮತ್ತು ಧನುಷ್ ರವರನ್ನು ಒಳಗೊಂಡ ತಂಡವು ಕಂಚಿನ ಪದಕವನ್ನು ಪಡೆದುಕೊಂಡಿದೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿಹಾಲ್‌ ರಾಜ್
ರಜತ್‌ ಆರ್‌ ಭಟ್

LEAVE A REPLY

Please enter your comment!
Please enter your name here