ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಕಡಬದ ವ್ಯಕ್ತಿಯಿಂದ ಪಿಐಎಲ್

ಪುತ್ತೂರು : ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ನ್ಯಾಯ ಪೀಠದ ಮುಂದೆ ಅರ್ಜಿ ನ.21ರಂದು ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಮತಾಂತರ ನಿಷೇಧಿಸಲು ರಾಜ್ಯ ಸರಕಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ, ಹಕ್ಕು ರಕ್ಷಣ ಕಾಯ್ದೆ-2020’ನ್ನು ಜಾರಿಗೊಳಿಸಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ಸರಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿರುವ ಅರ್ಜಿದಾರರ ವಿರುದ್ಧವೇ ಬಲವಂತದ ಮತಾಂತರ ಆರೋಪದಲ್ಲಿ 2 ಕ್ರಿಮಿನಲ್ ಪ್ರಕರಣಗಳಿವೆ. ಸ್ವತಃ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಆರೋಪಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲಾಗದು ಎಂದು ಹೇಳಿ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.