ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ‘ಪೋಲ್ ನೆಕ್ಸ್ಟ್’ ಶೀರ್ಷಿಕೆಯಡಿಯಲ್ಲಿ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆ ದರ್ಬೆಯಲ್ಲಿ ನಡೆಯಿತು.
ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸಕ್ತ ಸನ್ನಿವೇಶದಲ್ಲಿ ಪಕ್ಷದ ಅಗತ್ಯತೆ ಮತ್ತು ಪಕ್ಷದ ಕಾರ್ಯಚಟುವಟಿಕೆ ಬಗ್ಗೆ ವಿವರಿಸಿದರು.
ಅತಿಥಿಯಾಗಿದ್ದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ತೋರ್ಪಡಿಸಬೇಕಾಗಿದೆ. ಪ್ರಜಾಪ್ರಭುತ್ವ ಎದುರಿಸುತ್ತಿರುವ ಅಪಾಯಗಳನ್ನು ದಿಟ್ಟವಾಗಿ ಎದುರಿಸುವ, ಅನ್ಯಾಯ, ಅನೀತಿಗಳ ವಿರುದ್ಧ ವಿಧಾನ ಸೌಧದಲ್ಲಿ ಧ್ವನಿಯೆತ್ತಲು ಎಸ್‌ಡಿಪಿಐ ಅಭ್ಯರ್ಥಿಗಳಿಗೆ ಜನರು ಒಂದು ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದರು.
ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕೀರ್ ಅಳಕೆಮಜಲು ಪಕ್ಷದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಅರಿವು ಮೂಡಿಸಿದರು.
ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು ಪಡೀಲ್, ಉಪಾಧ್ಯಕ್ಷ ಹಮೀದ್ ಸಾಲ್ಮರ, ಕೋಶಾಧಿಕಾರಿ ಯಾಹ್ಯ ಕೂರ್ನಡ್ಕ, ಸದಸ್ಯರಾದ ವಿಶ್ವನಾಥ್ ಪುಣ್ಚತ್ತಾರ್, ಪಿ.ಬಿ. ಕೆ ಮಹಮ್ಮದ್, ರಶೀದ್ ಮಠ, ರಹೀಮ್ ವಿಟ್ಲ, ನಗರ ಸಮಿತಿ ಅಧ್ಯಕ್ಷ ಸಿರಾಜ್ ಎ.ಕೆ ಹಾಗೂ ಬ್ಲಾಕ್ ಮಟ್ಟದ ನಾಯಕರು, ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ರಹೀಂ ಪುತ್ತೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಅನ್ವರ್ ಪೆರುವಾಯಿ ವಂದಿಸಿದರು.