ಬಿಳಿನೆಲೆ:ನೆಟ್ಟಣ ಬಳಿ ಕಾರುಗಳೆರಡು ಜಖಂ: ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಕಡಬ :ಕಾರಿನಲ್ಲಿ ಕುಕ್ಕೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಬಿಳಿನೆಲೆ ಸಮೀಪ ಇನ್ನೊಂದು ಕಾರು ಡಿಕ್ಕಿಯಾಗಿ ಕಾರುಗಳು ಜಖಂ ಆಗಿದ್ದು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೊರಲಿಕೊಪ್ಪದ ನಾಗರಾಜು ದೂರು ನೀಡಿದ ಯಾತ್ರಾರ್ಥಿ. ನ.18 ರಂದು ತನ್ನ ಕುಟುಂಬಸ್ಥರೊಂದಿಗೆ ಕೊರಲಿಕೊಪ್ಪ ದಿಂದ ದೇವರ ದರ್ಶನಕ್ಕಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಹೋಗಿ ಉಡುಪಿಗೆ ಹೋಗುತ್ತಿದ್ದ ವೇಳೆ ನೆಟ್ಟಣ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.

ಕಾರಿಗೆ ಡಿಕ್ಕಿ ಉಂಟು ಮಾಡಿದ ಪರಿಣಾಮ ಎರಡು ಕಾರುಗಳು ಜಖಂ ಆಗಿದೆ. ಅಜಾಗರೂಕತೆಯಿಂದ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ತಿಳಿಸಿದ್ದು ಈ ಬಗ್ಗೆ ಕಡಬ ಪೊಲೀಸ್ ಠಾಣಾ ಅ.ಕ್ರ 101/2022 ಕಲಂ: ಕಲಂ:279 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.