ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅ. 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಶ್ರೀವರ್ಣಾ.ಪಿ.ಡಿ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ)-ಎತ್ತರ ಜಿಗಿತ, 80 ಮೀಟರ್ ಹರ್ಡಲ್ಸ್, ಉದ್ದ ಜಿಗಿತ , 4*100 ಮೀಟರ್ ರಿಲೇ -ಪ್ರಥಮ ಸ್ಥಾನ ಪಡೆದುಕೊಂಡಿದ್ದು,  ನ.19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ  ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here