ಕಾಣಿಯೂರು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ಕಾಣಿಯೂರು: ಕಾಣಿಯೂರು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ನಿವೇದಿತಾ ರಾಘವೇಂದ್ರ ಗುಂಡಿಗದ್ದೆಯವರ ಅಧ್ಯಕ್ಷತೆಯಲ್ಲಿ ಬಾಲಮೇಳವು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಕಾಣಿಯೂರು ಸ್ಮಾರ್ಟ್ ಟ್ಯೂಷನ್‌ನ ಹರಿಪ್ರಸಾದ್, ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿ, ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ, ಸ್ತ್ರೀಶಕ್ತಿ ಸಂಘದ ಪ್ರತಿನಿಧಿ ಸುಚಿತ್ರಾ ಕಟ್ಟತ್ತಾರು, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಭಾರತಿ, ಗುಣವತಿ, ಆಶಾಕಾರ್ಯಕರ್ತೆ ಕುಸುಮಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೋಹಿಣಿ ಸುವರ್ಣ ಅಬೀರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here