ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದ.ಕ ಹಾಲು ಒಕ್ಕೂಟಗಳ ಸಹಕಾರದೊಂದಿಗೆ 69 ನೇ ಅಖಿಲಾ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಹಾಲಿನ ಗುಣಮಟ್ಟ ಸುಧಾರಣೆ ಮತ್ತು ಹಾಲಿನ ಪ್ರಮಾಣ ಹೆಚ್ಚಳದ ಕುರಿತು ಮಾಹಿತಿ ಶಿಬಿರವು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಗಾಳಿಬೆಟ್ಟು ಶಾಖೆಯಲ್ಲಿ ನಡೆಯಿತು.
ಕಾರ್ಯಮ್ರಮದ ಉದ್ಘಾಟನೆಯನ್ನು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ನೆರವೇರಿಸಿದರು. ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತರಣಾಧಿಕಾರಿ ನಾಗೇಶ್, ಪಶು ವೈದ್ಯಾಧಿಕಾರಿ ಡಾ.ಸಚಿನ್ ಮಾಹಿತಿ ನೀಡಿದರಸ್ತೀ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳು, ಸದಸ್ಯರು ಮಾಹಿತಿ ಶಿಬಿರದಲ್ಲಿ ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ಸ್ವಾಗತಿಸಿ, ಕಾರ್ಯದರ್ಶಿ ದಮಯಂತಿ ಮುದುವ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.