ನ.27 ಕ್ಕೆ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ

ಕ್ರೀಡಾ ಲಾಂಛನ, ವಿವಾಹ ವೇದಿಕೆ ಲಾಂಛನ, ಒಕ್ಕೊರಲು 2 ನೇ ಆವೃತ್ತಿ ಬಿಡುಗಡೆ

ಪುತ್ತೂರು: ಸಮುದಾಯದ ಸಂಘಟನೆ ಸೌಹಾರ್ದಕ್ಕಾಗಿ ಎಂಬ ಗುರಿಯಿಟ್ಟುಕೊಂಡು ಎಲ್ಲಾ ಸಮಾಜದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನ.27 ರಂದು ತೆಂಕಿಲ ಒಕ್ಕಲಿಗನಗರದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ.

ಕಾರ್ಯಕ್ರಮದಲ್ಲಿ ಒಕ್ಕಲಿಗ ಯುವ ಗೌಡ ಸಂಘದಿಂದ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಲಾಂಛನ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕಲಿಗ ವಿವಾಹ ವೇದಿಕೆ ಲಾಂಛನವನ್ನು ಮತ್ತು ಒಕ್ಕಲಿಗ ಗೌಡ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳನ್ನೊಳಗೊಂಡ ‘ಒಕ್ಕೊರಲು’ ಇದರ ೨ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮಿಜಿಯವರ ಅನುಗ್ರಹದೊಂದಿಗೆ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕರಾಗಿರುವ ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ| ಕೆ.ವಿ.ರೇಣುಕಾಪ್ರಸಾದ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಮುದಾಯದ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸಲಾಗುವುದು. ಬೆಳಿಗ್ಗೆ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.