ಬೋಳಂತೂರು: ಅಕ್ರಮ‌ ಗೋ‌ ಸಾಗಾಟ ಪತ್ತೆ

0

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಸಹಿತ ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.24ರ ಮುಂಜಾನೆ ವೇಳೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರಿನಲ್ಲಿ ನಡೆದಿದೆ.

ಸಾಯಿಬು ಬ್ಯಾರಿ ನಗ್ರಿ ಹಾಗೂ ಪ್ರದೀಪ್ ಸಿಕ್ವೇರಾ ಬಂಧಿತ ಆರೋಪಿಗಳಾಗಿದ್ದಾರೆ. ಗಸ್ತು ನಿರತರಾಗಿದ್ದ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ವೇಳೆ ವಾಹನದಲ್ಲಿ ನಾಲ್ಕು ಜಾನುವಾರುಗಳಿದ್ದು, ಅವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here