ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ 2 ರೂ.ಹೆಚ್ಚಳ

0

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.
ಹಾಲು, ಮೊಸರಿನ ಪರಿಷ್ಕೃತ ದರ ನ.23ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ ದರ 37ರಿಂದ 39 ರುಪಾಯಿಗೆ ಹೆಚ್ಚಳ ಮಾಡಲಾಗಿದೆ.‌ ಇನ್ನು ಸ್ಪೆಷಲ್ ಹಾಲಿನ ದರ 43 ರಿಂದ 45 ರೂಪಾಯಿಗೆ, ಸಮೃದ್ಧಿ ಹಾಲಿನ ದರ 48 ರಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಹೋಮೋಜಿನೈಸ್ಡ್ ಹಾಲು 38 ರೂ.ರಿಂದ 40 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಹಸುವಿನ ಹಾಲು 42ರೂ.ಗಳಿಂದ 44 ರೂ.ಗೆ ಏರಿಕೆ. ಶುಭಂ ಹಾಲು 43 ರೂ. ರಿಂದ 45 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ. ರಿಂದ 46 ರೂ.ಗೆ ಏರಿಕೆ. ಸಂತೃಪ್ತಿ ಹಾಲು 50 ರೂ. ರಿಂದ 52 ರೂ.ಗೆ ಏರಿಕೆ. ಡಬಲ್ ಟೋನ್ಡ್ ಹಾಲು 36 ರೂ. ರಿಂದ 38 ರೂ.ಗೆ ಏರಿಕೆಯಾಗಿದೆ. ಮೊಸರಿನ ದರವನ್ನು ಲೀಟರ್‌ಗೆ 45 ರಿಂದ 47 ರೂಪಾಯಿಗೆ ಏರಿಕೆ ಮಾಡಲಾಗಿದೆ. ರೈತರಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ದರ ಏರಿಕೆ ಮಾಡುತ್ತಿರುವುದಾಗಿ ಕೆಎಂಎ- ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here