ಪ್ರಿಯದರ್ಶಿನಿಯಲ್ಲಿ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಗಾರ

ಬೆಟ್ಟಂಪಾಡಿ: ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇವರ ವತಿಯಿಂದ ಮಕ್ಕಳ ಲೈಂಗಿಕ ದೌರ್ಜನ್ಯ ಜಾಗೃತಿ ಕಾರ್ಯಕ್ರಮ ನ. 23 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬಾಲ ನ್ಯಾಯಮಂಡಳಿ ನ್ಯಾಯಪೀಠದ ಸದಸ್ಯರಾದ ಕಸ್ತೂರಿ ಆರ್. ಮಾತನಾಡಿ ‘ಸುಶಿಕ್ಷಿತ ಜನಾಂಗ ನಮ್ಮದಾದರೂ ಲೈಂಗಿಕ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಇನ್ನಿತರ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದಕ್ಕೆ ಫೋಕ್ಸೋ ಕಾಯಿದೆ ಅಸ್ತಿತ್ವಕ್ಕೆ ಬಂದಿದೆ’ ಎಂದರು.

ರೋಟರಿ ಸ್ವರ್ಣದ ಅಧ್ಯಕ್ಷ ವೆಂಕಟರಮಣ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಸೆಂಟ್ರಲ್ ಪುತ್ತೂರು ಅಧ್ಯಕ್ಷ ಮಹಮ್ಮದ್ ರಫೀಕ್ ದರ್ಬೆ, ರೋಟರಿ ಜಿಲ್ಲಾ ಝೋನಲ್ ಲೆಫ್ಟಿನೆಂಟ್ ಸೆನೋರಿಟ, ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ರಂಗನಾಥ ರೈ ಗುತ್ತು, ಮಕ್ಕಳ ಪ್ರತಿನಿಧಿಗಳಾದ ಕುಮಾರಿ ಹರ್ಷ ಹಾಗೂ ಕುಮಾರ್ ಅಶ್ವಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ ಸ್ವಾಗತಿಸಿ, ಸಹ ಶಿಕ್ಷಕಿ ಮಮತಾ ವಂದಿಸಿದರು. ಸಹಶಿಕ್ಷಕಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.