ನ. 28, ಪುತ್ತೂರು ಪ್ರಶಾಂತ್ ಮಹಲ್ ನಲ್ಲಿ ಅಂತರಾಷ್ಟ್ರೀಯ ಜಾಂಬೂರಿ ಉತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ದ. 21 ರಿಂದ 27 ರತನಕ ಮೂಡಬಿದಿರೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಬಗ್ಗೆ ಪುತ್ತೂರು ಮತ್ತು ಕಡಬ ತಾಲ್ಲೂಕು ವ್ಯಾಪ್ತಿಯ ಪೂರ್ವಭಾವಿ ಸಭೆ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ನ ಸನ್ನಿಧಿ ಹಾಲ್ ನಲ್ಲಿ ನ. 28 ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಈ ಸಭೆಯಲ್ಲಿ ಡಾ.ಮೋಹನ್ ಆಳ್ವರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮದ ಸಂಘಟಕರಾದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಮತ್ತು ಪುತ್ತೂರು ನಗರಸಭಾ ಉಪಾಧ್ಯಕ್ಷೆ ವಿದ್ಯಾ ಗೌರಿರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.