ಕಂಬಳ ಕೂಟ ನಿಷೇಧಿಸುವಂತೆ ಮತ್ತೆ ಮೇಲ್ಮನವಿ ಸಲ್ಲಿಸಿದ ಪೇಟ : ಅಶೋಕ್ ರೈಯವರಿಂದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಮೇಲ್ಮನವಿ ಅರ್ಜಿ

0


ಅಶೋಕ್ ರೈ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮೇಲ್ಮನವಿ ಅರ್ಜು ಸಲ್ಲಿಸಿದ್ದಾರೆ. ಅಶೋಕ್ ರೈಯವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ನಡೆಯಲಿದೆ. ಅಶೋಕ್ ರೈ ಪರ ಸುಪ್ರೀಂಕೋರ್ಟಿನಲ್ಲಿ ಖ್ಯಾತ ನ್ಯಾಯವಾದಿ ಸಂಜಯ್ ನೂಲಿ ವಾದಿಸುತ್ತಿದ್ದಾರೆ.

ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ
ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ ಕಂಬಳ ಆಯೋಜನೆಗೆ ನಿಷೇಧ ಹೇರಬೇಕು ಎಂದು ಪ್ರಾಣಿದಯಾ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ‌. ಇದರ ವಿರುದ್ಧ ಅಶೋಕ್ ರೈಯವರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಂಬಳ ಕೂಟಕ್ಕೆ ಅವಕಾಶ ಕಲ್ಪಿಸಿದ್ದರು. ಆ ಬಳಿಕ ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಾತಂಕವಾಗಿ ಕಂಬಳ ಕೂಟ ನಡೆಯುತ್ತಿತ್ತು. ಇದೀಗ ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಾರೆ‌. ಇದಕ್ಕೆ ತಕರಾರು ಅರ್ಜಿ ಸಲ್ಲಿಸಿರುವ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈಯವರು ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸ ಇದೆ. ಧಾರ್ಮಿಕ ಪರ‌ಂಪರೆ ಇದೆ. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ಆಗುವುದಿಲ್ಲ. ಮಕ್ಕಳಂತೆ ಕೋಣಗಳನ್ನು ಪ್ರೀತಿಸಿ ಸಾಕಿ ಸಲಹಲಾಗುತ್ತಿದೆ‌. ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಕೊಡಬೇಕು ಎಂದು ಸುಪ್ರೀಂಕೋರ್ಟಿಗೆ ರಿಟ್ ಸಲ್ಲಿಸಿದ್ಧಾರೆ. ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದ್ದು ಅಶೋಕ್ ರೈ ಪರ ಖ್ಯಾತ ವಕೀಲ‌ ಸಂಜಯ್ ನೂಲಿ ಅವರು ವಾದ ಮಂಡಿಸುತ್ತಿದ್ದಾರೆ. ಕರ್ನಾಟಕದ ಕಂಬಳ, ಮಹಾರಾಷ್ಟ್ರ ಮತ್ತು ತಮಿಳ್ನಾಡಿನ ಜಲ್ಲಿಕಟ್ಟು ವಿವಾದದ ಕುರಿತು ಸುಪ್ರೀ‌ಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ನಡೆಯಲಿದ್ದು ನ.29ಕ್ಕೆ ಅರ್ಜಿಯ ವಿಚಾರಣೆ ನಿಗದಿಯಾಗಿದೆ.

LEAVE A REPLY

Please enter your comment!
Please enter your name here