ವಿಕ್ಟರ್ ಆ.ಮಾ, ವಿಕ್ಟರ್ ಪ್ರೌಢಶಾಲೆಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾಗಿ ಉಲ್ಲಾಸ್ ಪೈ, ರಮೇಶ್ ಕೆ.ವಿ ಆಯ್ಕೆ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಉಲ್ಲಾಸ್ ಪೈ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ರಮೇಶ್ ಕೆ.ವಿರವರು ಅನುಕ್ರಮವಾಗಿ ನೇಮಕಗೊಂಡಿದ್ದಾರೆ.

ಅಧ್ಯಕ್ಷರಾಗಿ ಆಯಾ ಶಾಲೆಯ ಮುಖ್ಯ ಶಿಕ್ಷಕರಾದ ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆರಿ ಡಿ’ಸೋಜ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರೋಸ್ಲಿನ್ ಲೋಬೊರವರು ಮುಂದುವರೆಯಲಿದ್ದಾರೆ. ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷರಾದ ಉಲ್ಲಾಸ್ ಪೈಯವರು ಪುತ್ತೂರು ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಉಪಾಧ್ಯಕ್ಷರಾದ ರಮೇಶ್ ಕೆ.ವಿರವರು ದರ್ಬೆ ಲಿಟ್ಲ್ ಫ್ಲವರ್ ಶಾಲಾ ಬಳಿ ಚೈತ್ರಾ ಎಲೆಕ್ಟ್ರಾನಿಕ್ಸ್ ಆಂಡ್ ಕಾರ್ ಎಕ್ಸೆಸರೀಸ್ ಎಂಬ ಸಂಸ್ಥೆಯ ಮಾಲಕರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.