ನ.26: ಸವಣೂರಿನಲ್ಲಿ ವಿದ್ಯಾರ್ಥಿಗಳಿಗೆ ಕವನ ರಚನಾ ಕಾರ್ಯಾಗಾರ, ಕವಿಗೋಷ್ಠಿ

ಪುತ್ತೂರು: ಚುಟುಕು ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕವನ ರಚನಾ ಕಾರ್ಯಾಗಾರ ಮತ್ತು ಕವಿಗೋಷ್ಠಿ ನ.26 ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚು.ಸಾ.ಪನ ಅಧ್ಯಕ್ಷ ಅಬ್ದುಲ್ ಸಮದ್ ಬಾವಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜಯನಗರ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ, ಮಕ್ಕಳ ಸಾಹಿತಿ ರಮೇಶ್ ಉಳಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರ, ಕವಿಗೋಷ್ಠಿ ನಡೆಸಿಕೊಡಲಿದ್ದು, ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಚು.ಸಾ.ಪ ಪುತ್ತೂರು ತಾಲೂಕು ಘಟಕದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.