ಕೊಳ್ತಿಗೆ ಗ್ರಾಮದ ಪಾಂಬಾರ್‌ಗೆ ಬಸ್ಸು ಸಂಪರ್ಕ ಕಲ್ಪಿಸಲು ಕೆಎಸ್‌ಆರ್‌ಟಿಸಿಗೆ ಮನವಿ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಂಬಾರ್‌ಗೆ ಬಸ್ ವ್ಯವಸ್ಥೆ ಮಾಡಬೇಕು ಮತ್ತು ಗ್ರಾಮದ ಬಸ್ ವ್ಯವಸ್ಥೆಯನ್ನು ಸರಿ ಮಾಡಿಕೊಡಬೇಕು ಎಂದು ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ಇಸ್ಮಾಯಿಲ್‌ರವರಿಗೆ ಮನವಿಯನ್ನ ಕೊಳ್ತಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೊಳ್ತಿಗೆ ಗ್ರಾಮ ಪಂಚಾಯಿತ್ ಸದಸ್ಯರುಗಳಾದ ವಸಂತ ರೈ ದುಗ್ಗಳ, ಪ್ರಮೋದ್ ಕೆ.ಎಸ್, ಪವನ್ ದೊಡ್ಡಮನೆ, ಕೊಳ್ತಿಗೆ ಸಿಎ ಬ್ಯಾಂಕ್ ಮಾಜಿ ನಿರ್ದೇಶಕ ಯಶೋಧರ ಪಾಂಬಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇಸ್ಮಾಯಿಲ್‌ರವರು ಮನವಿಯ ಬಗ್ಗೆ ಪರಿಶೀಲನೆ ನಡೆಸಿ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.