ನ.26 :ಲಯನ್ಸ್/ಲಿಯೋ ಕ್ಲಬ್ ಪುತ್ತೂರ್‍ದ ಮುತ್ತು ವತಿಯಿಂದ ಮುಂಡೂರು ಸ. ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಪುತ್ತೂರು: ಜಿಲ್ಲೆ 317 ಡಿ, ಪ್ರಾಂತ್ಯ 7, ವಲಯ ಒಂದರ ಲಯನ್ಸ್ ಕ್ಲಬ್ ಪುತ್ತೂರ್‍ದ ಮುತ್ತು, ಲಿಯೋ ಕ್ಲಬ್ ಪುತ್ತೂರ್‍ದ ಮುತ್ತು ಇವರ ನೇತೃತ್ವದಲ್ಲಿ ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸುಳ್ಯ ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವು ನ.26 ರಂದು ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.

ಈ ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ಹಲ್ಲು ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಲಯನ್ಸ್ ಕ್ಲಬ್ ಪುತ್ತೂರ್‍ದ ಮುತ್ತು ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಲಿಯೋ ಕ್ಲಬ್ ಪುತ್ತೂರ್‍ದ ಮುತ್ತು ಅಧ್ಯಕ್ಷೆ ರಂಜಿತಾ ಶೆಟ್ಟಿ, ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ  ವಿಜಯಾ ಪಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.