ಕುಂಬ್ರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

0

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನ.26ರಂದು ಕುಂಬ್ರದಲ್ಲಿ ನಡೆದಿದೆ.

ನ.25ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ನಬೀಸ ಎಂಬವರು ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತೇ ಎನ್ನುವುದು ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರು ಪತಿ ಇಬ್ರಾಹಿಂ ಹಾಗೂ ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here