ಪುತ್ತೂರು: ನ.26ರಂದು ಸುದಾನ ಶಾಲೆಯಲ್ಲಿ ಸಂವಿಧಾನ ದಿನವನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಮೊಹಮ್ಮದ್ ಫಾಲಿಲ್ (10 ನೇ)ದಿನದ ಮಹತ್ವವನ್ನು ತಿಳಿಸಿದರು. ಶಾಲಾ ನಾಯಕ ಸನ್ವರ್ಯಗೌಡ (10ನೇ) ಪ್ರತಿಜ್ಞಾ ಸ್ವೀಕಾರವನ್ನು ನಡೆಸಿದರು.
ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಭಾರತ ಸಂವಿಧಾನದ ಪ್ರಸ್ತಾವನೆ ಹಾಗೂ ಡಾ. ಬಿ. ಆರ್ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಇದರ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ನಡೆಸಲಾಯಿತು. ಶಾಲಾ ಸೋಶಿಯಲ್ ಸಂಘ ಜಾಗೃತಿ ಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.