ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸಾಮೂಹಿಕ ಕ್ರೀಡಾಕೂಟ

0

ಕಾಣಿಯೂರು: ಯುವ ಸಂಘಟನೆಗಳು ಸಾಮಾಜಿಕ ಚಿಂತನೆಯೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ಕೊಟ್ಟಾಗ ಸಮಾಜದ ಪ್ರಗತಿಗೆ ಕಾರಣವಾಗುತ್ತದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿ ರುವ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲವು ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಒಂದು ಮಾದರಿ ಯುವಕ ಮಂಡಲವಾಗಿ ಹೊರಹೊಮ್ಮಿದೆ ಎಂದು ಪ್ರಗತಿಪರ ಕೃಷಿಕರು, ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬೈತಡ್ಕ ಹೇಳಿದರು.

ಅವರು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಯುವಕ ಮಂಡಲದ ಬೆಳ್ಳಿಹಬ್ಬ ವರ್ಷಾಚರಣೆಯ ಪ್ರಯುಕ್ತ ಕಾಣಿಯೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ನ ೨೭ರಂದು ನಡೆದ ಸಾಮೂಹಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಣಿಯೂರು ಸ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಹಿಸಿದ್ದರು. ಕಾಣಿಯೂರು ಗ್ರಾ.ಪಂ.ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾ.ಪಂ.ಸದಸ್ಯ ಮೋಹನ್ ಅಗಳಿ, ಕಾಣಿಯೂರು ಸ.ಹಿ.ಪ್ರಾ.ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ, ಕಲ್ಪಡ ಕೊಡಿಯಾಲ ಗೆಳೆಯರ ಬಳಗದ ಅಧ್ಯಕ್ಷ ಯುವರಾಜ್ ಕಲ್ಪಡ. ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷರಾದ ಸುರೇಶ್ ಓಡಬಾಯಿ, ಮಾಜಿ ಅಧ್ಯಕ್ಷರಾದ ಗಣೇಶ್ ಪೆರ್ಲೋಡಿ, ಯಶೋಧರ ಮುಗರಂಜ ಉಪಸ್ಥಿತರಿದ್ದರು. ಯುವಕ ಮಂಡಲ ಕಾರ್ಯದರ್ಶಿ ವಿನಯ ಕುಮಾರ್ ಎಳುವೆ ಸ್ವಾಗತಿಸಿ, ಕೀರ್ತಿಕುಮಾರ್ ಎಳುವೆ ವಂದಿಸಿದರು. ಬಾಬು ಮಾದೋಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here