ಕ.ರಾ.ಕಾ.ಪತ್ರಕರ್ತರ ಸಂಘದ ಪುತ್ತೂರು |ಘಟಕದ ಚುನಾವಣೆ: ಎರಡನೇ ದಿನವೂ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ: ನ.28 ಕೊನೇಯ ದಿನ: ಚುನಾವಣಾ ಮೇಲುಸ್ತುವಾರಿಗಳಾಗಿ ರಮೇಶ್ ಕುಟ್ಟಪ್ಪ, ರವಿಕುಮಾರ್ ನೇಮಕ

0

ಪುತ್ತೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ೨೦೨೨-೨೫ನೇ ಸಾಲಿನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ದ.೫ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ನ.27ರಂದೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಯಾಗಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಅವರು ಮಾಹಿತಿ ನೀಡಿದ್ದಾರೆ. ಪ್ರಥಮ ದಿನವಾದ ನ.೨೬ರಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಎರಡನೇ ದಿನವಾದ ನ.೨೭ರಂದೂ ನಾಮಪತ್ರ ಸಲ್ಲಿಕೆ ಆಗಿಲ್ಲ.

ನ. ೨೮ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೧ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಬಳಿಕ ನಾಮಪತ್ರ ಪರಿಶೀಲನೆ ನಡೆದು ಕ್ರಮಬದ್ಧ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ನ.೨೯ರ ಮಧ್ಯಾಹ್ನ ೧ರವರೆಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶ ಇದೆ. ಬಳಿಕ ಅಂತಿಮ ಕಣದಲ್ಲಿ ಇರುವ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ದ.೫ರಂದು ಪತ್ರಿಕಾ ಭವನದಲ್ಲಿ ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 23 ಮತದಾರರಿದ್ದಾರೆ. ಈ ಮಧ್ಯೆ, ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಮೇಲುಸ್ತುವಾರಿಯಾಗಿ ರಮೇಶ್ ಕುಟ್ಟಪ್ಪ, ಎನ್. ರವಿಕುಮಾರ್ ನಿಯೋಜನೆಗೊಳಿಸಲಾಗಿದೆ.

ಡಿ.5ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಶಾಖೆಯ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮೇಲುಸ್ತುವಾರಿಗಳಾಗಿ ರಾಜ್ಯ ಸಮಿತಿ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ ಮತ್ತು ಚುನಾವಣಾ ಪ್ರಕ್ರಿಯೆಗೆ ಸಹಕಾರಿಯಾಗಿ ನಿಕಟಪೂರ್ವ ರಾಜ್ಯ ಸಹಾಯಕ ಚುನಾವಣಾಧಿಕಾರಿಯಾಗಿ ಎನ್.ರವಿಕುಮಾರ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here