ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ-“ವಿವೇಕ ಕ್ರೀಡಾ ಸಂಭ್ರಮ-2022”

0

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಇದರ 2022-23ರ ಸಾಲಿನ ವಾರ್ಷಿಕ ಕ್ರೀಡಾಕೂಟ -“ವಿವೇಕ ಕ್ರೀಡಾ ಸಂಭ್ರಮ-2022”ದ ಉದ್ಘಾಟನಾ ಕಾರ್ಯಕ್ರಮ ಶಾಲಾ ಕ್ರೀಡಾಂಗಣದಲ್ಲಿ ನ.26ರಂದು ನಡೆಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶಿವಪ್ರಕಾಸ್.ಎಂ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಒಳ್ಳೆಯ ಆರೋಗ್ಯ, ಸಂಸ್ಕೃತಿ ಸಂಸ್ಕಾರವನ್ನು ಪಡೆಯಲು ಆರೋಗ್ಯವೇ ಮುಖ್ಯ ಕ್ರೀಡೆ ಗುಣ, ಆತ್ಮ ವಿಶ್ವಾಸ, ಬದುಕಿಗೆ ಸ್ಪೂರ್ತಿ ನೀಡಬಲ್ಲದ್ದು ಮತ್ತು ಸಾಧನೆಯ ಉತ್ತುಂಗಕ್ಕೆ ಕ್ರೀಡೆಯ ಒಂದು ಪ್ರಮುಖ ಹಂತ ಎಂದರು.

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್  ಟೆಕ್ನಾಲಜಿಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವಾಸ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಪರಿಪೂರ್ಣ ಹಾಗೂ ದೇಶಭಕ್ತಿ, ಸದೃಢ ಯುವ ಜನರಾಗಿ ರೂಪಿಸುವಲ್ಲಿ ಕ್ರೀಡಾಯ ಮಹತ್ವವನ್ನು  ತಿಳಿಸಿದರು. ಈ ಶೈಕ್ಷಣಿಕ ವರ್ಷದಲ್ಲಿ ಕ್ರೀಡಾ ವಿಭಾಗದಲ್ಲಿ ಸಂಸ್ಥೆಯ  ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಶಿಸಿದರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ತೀರಾ ಅನಿವಾರ್ಯವಾಗಿ ಬೇಕಾಗಿರುವ 400ಮೀ ನ  ಟ್ರಾಕ್ನ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ತಮ್ಮ ಸಹಕಾರದ ಭರವಸೆಯನ್ನು ನೀಡಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಧ್ವಜ ವಂದನೆ ಸ್ವೀಕರಿಸಿದ ಪುತ್ತೂರಿನ ಖ್ಯಾತ ಉದ್ಯಮಿ  ಶಿವಪ್ರಸಾದ್ ರೈಯವರು ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ  ಸತೀಶ್ ಬಪ್ಪಳಿಗೆ ಇವರು ಧ್ವಜಾರೋಹಣ ಗೈದು ಮಾತನಾಡಿ ಪೋಷಕರಾಗಿ ಶಾಲಾ ಹಿರಿಮೆ-ಗರಿಮೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಸಂಸ್ಥೆಗೆ ಮತ್ತು  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ ನಾಗೇಶ್ ಪ್ರಭು ಇವರು ಕ್ರೀಡಾ ಜ್ಯೋತಿ ಬೆಳಗುವುದರ ಮೊಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾ ಕಾರ್ಯದರ್ಶಿ ಯುಕ್ತಶ್ರೀ ಕ್ರೀಡಾ ಪ್ರತಿಜ್ಞಾ ವಿಧಿ ನೆರವೇರಿಸಿದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರುಗಳು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಶೆಣೈ, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಭಾಸ್ಕರ್ ಗೌಡ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿರಾದ ವಾಣಿಶ್ರೀ.ಎನ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

LEAVE A REPLY

Please enter your comment!
Please enter your name here