ಪುತ್ತೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾಗೂ ಇತರ ಅನುದಾನಗಳ ಒಗ್ಗೂಡಿಸುವಿಕೆಯೊಂದಿಗೆ ಅಭಿವೃದ್ಧಿಗೊಳ್ಳುತ್ತಿರುವ ಕಾಮಗಾರಿಗಳ ಪರಿಶೀಲನೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಅಭಿಯಂತರರಾದ ಸಿ.ಕೆ. ಮಲ್ಲಪ್ಪ ಅವರು ಅರಿಯಡ್ಕ ಪಲ್ಲ ಅಮೃತ ಸರೋವರ, ಒಳಮೊಗ್ರು ಗ್ರಾ.ಪಂ. ಕಟ್ಟಡ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನ.29ರಂದು ಪುತ್ತೂರು ತಾಲೂಕಿಗೆ ಭೇಟಿ ನೀಡಿದ ಅವರು ಅರಿಯಡ್ಕ ಗ್ರಾ.ಪಂ. ವ್ಯಾಪ್ತಿಯ ಕೌಡಿಚ್ಚಾರ್ ಪಲ್ಲ ಮದಕ ಅಮೃತ ಸರೋವರ ಕೆರೆಗೆ ಭೇಟಿ ನೀಡಿ ಕೆರೆಯ ಅಭಿವೃದ್ಧಿ ಕುರಿತು ತಾಂತ್ರಿಕ ಸಲಹೆ, ಸೂಚನೆಗಳನ್ನು ನೀಡಿದರು. ಅರಿಯಡ್ಕ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ, ಸದಸ್ಯರು, ಹಾಗೂ ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಕೆರೆ ಅಭಿವೃದ್ಧಿ ಕುರಿತು ತಮ್ಮ ಯೋಜನೆಯನ್ನು ತಿಳಿಸಿದರು. ಬಳಿಕ ಒಳಮೊಗ್ರು ಗ್ರಾಮ ಪಂಚಾಯತ್ನ ನೂತನವಾಗಿ ನಿರ್ಮಾಣವಾಗುತ್ತಿರುವ ಪಂಚಾಯತ್ ಕಚೇರಿ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿಗಳು ಹಾಗೂ ನರೇಗಾ ನೋಡೆಲ್ ಅಧಿಕಾರಿಯಾದ ಆನಂದ ಕುಮಾರ್, ಪುತ್ತೂರು, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಪುತ್ತೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಭರತ್ ಬಿ.ಎಂ., ಸಹಾಯಕ ನಿರ್ದೇಶಕರು (ಗ್ರಾ.ಉ) ಶೈಲಜಾ ಭಟ್, ಕಿರಿಯ ಅಭಿಯಂತರರಾದ ಸಂದೀಪ್, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿ ಕಿಶನ್ ರಾವ್ ಬಿ.ಎಸ್., ಜಿಲ್ಲಾ ಐ.ಇ.ಸಿ ಸಂಯೋಜಕರಾದ ವಿನಿಶಾ, ಒಳಮೊಗ್ರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್, ಅರಿಯಡ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಕುಮಾರಿ, ಕಾರ್ಯದರ್ಶಿ ಶಿವರಾಮ್, ಪುತ್ತೂರು ತಾಂತ್ರಿಕ ಸಂಯೋಜಕರಾದ ವಿನೋದ್ ಕುಮಾರ್, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಲಕ್ಷ್ಮೀ, ತಾಲೂಕು ಐ.ಇ.ಸಿ. ಸಂಯೋಜಕ ಭರತ್ ರಾಜ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.