ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ – ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

0

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರ ತಂಡ ವಶಕ್ಕೆ ಪಡೆದ ಘಟನೆ ನಡೆದಿದೆ.

ವಿಟ್ಲ ಮೇಗಿನಪೇಟೆ ನಿವಾಸಿ ಇಸ್ಮಾಯಿಲ್ ರವರ ಪುತ್ರ ಅಬ್ದುಲ್ ಖಾದರ್ ಯಾನೆ ಸೌಕತ್ (30 ವ.) ಬಂಧಿತ ಆರೋಪಿ. ನ.29 ರಂದು ವಿಟ್ಲ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್ ಖಾದರ್ ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿರುವ ಸಂಶಯದ ಮೇರೆಗೆ ಅಬ್ದುಲ್ ಖಾದರ್ ರನ್ನು ವಶಕ್ಕೆ ಪಡೆದಿದ್ದು, ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ದೃಢಪಟ್ಟಿದ್ದು, ವೈದ್ಯಾಧಿಕಾರಿಗಳು ವೈದ್ಯಕೀಯ ದೃಢಪತ್ರ ನೀಡಿದ ಹಿನ್ನೆಲೆ ಆ ವ್ಯಕ್ತಿಯನ್ನು ಬಂಧಿಸಿ ಎನ್ ಡಿ ಪಿ ಎಸ್ ಆಕ್ಟ್ ನಂತೆ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here