ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಪೆರಣ ಭಂಡಾರ ಮನೆಯಲ್ಲಿ ನ.27ರಿಂದ ನಡೆಯುತ್ತಿರುವ ಶ್ರೀ ಮದ್ಭಾಗವತ ಸಪ್ತಾಹ ಜ್ಞಾನ ಯಜ್ಞದ ಮೂರನೇ ದಿನವಾದ ನ.30ರಂದು ಶ್ರೀಮದ್ಭಾಗವತ ಪಾರಾಯಣ, ಸುದರ್ಶನ ಹವನ, ಭಜನೆ, ಪ್ರವಚನ ನಡೆಯಿತು.
ಬೆಳಿಗ್ಗೆ ಕಲಶಾರಾಧನೆ, ಶ್ರೀಮದ್ಭಾಗವತ ಪಾರಾಯಣ, ಸಪ್ತಮ ಸ್ಕಂದಾ ಪರ್ಯಂತ ನಡೆಯಿತು. ಶ್ರೀ ಸುದರ್ಶನ ಹವನ, ಮಧ್ಯಾಹ್ನ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಶ್ರೀ ಸಿದ್ಧಿವಿನಾಯಕ ಭಜನಾಮಂಡಳಿ ಗೋಳಿತ್ತೊಟ್ಟು ಇವರಿಂದ ಭಜನಾ ಸೇವೆ ನಡೆಯಿತು. ಸಂಜೆ ಶ್ರೀ ಮದ್ಭಾಗವತ ಪ್ರವಚನ, ಶ್ರೀದುರ್ಗಾಹವನ, ಪೂರ್ಣಾಹುತಿ, ಮಹಾಪೂಜೆ ನಡೆಯಿತು. ವೇದಮೂರ್ತಿ ವಿದ್ವಾನ್ ಕೆ.ಕೃಷ್ಣಮೂರ್ತಿ ಕಾರಂತ ಪೆರ್ನೆ ಇವರ ಆಚಾರ್ಯತ್ವದಲ್ಲಿ ವಿದ್ವಾನ್ ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ, ಮುರಳಿಕೃಷ್ಣ ಭಟ್ ನಂದಗೋಕುಲ ಆಲಂತಾಯ ಹಾಗೂ ವೇದಮೂರ್ತಿ ಶ್ರೀಕೃಷ್ಣ ಭಟ್ ಬಟ್ಯಮೂಲೆ ಕಾಟುಕುಕ್ಕೆರವರು ಪ್ರವಚನ ನೀಡಿದರು. ಪೆರಣ ಭಂಡಾರ ಮನೆಯ ಮೊಕ್ತೇಸರ ವಿಶ್ವನಾಥ ಗೌಡ ಪೆರಣ, ಶ್ರೀ ಮದ್ಭಾಗವತ ಸಪ್ತಾಹ ಜ್ಞಾನ ಯಜ್ಞ ಸಮಿತಿ ಅಧ್ಯಕ್ಷ ಓಡ್ಯಪ್ಪ ಗೌಡ ಪೆರಣ, ಪ್ರಧಾನ ಕಾರ್ಯದರ್ಶಿ ಜನಾರ್ದನ ಗೌಡ ಬರೆಮೇಲು, ಸಮಿತಿ ಪದಾಽಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.