ಡಿ.2:ಮಾಯಿದೆ ದೇವುಸ್ ಹಿ.ಪ್ರಾ ಶಾಲಾ ವಾರ್ಷಿಕೋತ್ಸವ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮಾಯಿದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 58ನೇ ವರ್ಷದ ವಾರ್ಷಿಕೋತ್ಸವವು ಡಿ.2 ರಂದು ಮಾಯಿದೆ ದೇವುಸ್ ಚರ್ಚ್ ವಠಾರದಲ್ಲಿ ಬೆಳಿಗ್ಗೆ ಜರಗಲಿದೆ.

ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ವೈದ್ಯರಾದ ಡಾ.ಜಯಪ್ರಕಾಶ್, ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಜನೆಟ್ ಡಿ’ಸೋಜ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಸಂಹಿತಾ ಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ.ಸಂತೋಷ್ ಕುಮಾರ್, ಶಾಲಾ ನಾಯಕಿ ಎ.ನಫೀಶತ್ ರಿಧಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here