ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದಿವಿಜ್ಞಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಇದರ ಆಶ್ರಯದಲ್ಲಿ ನ. 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 7ನೇತರಗತಿ ವಿದ್ಯಾರ್ಥಿನಿ ದಿವಿಜ್ಞಾ ಯು ಎಸ್ (ಕಲ್ಲರ್ಪೆಯ ಶಿವಪ್ರಸಾದ್ ಮತ್ತು ಪವಿತ್ರ ದಂಪತಿಯ ಪುತ್ರಿ) 14ರ ವಯೋಮಾನದ ಪ್ರಾಥಮಿಕ ವಿಭಾಗದ ಬಾಲಕಿಯರ 100ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here