ಕುಂಬ್ರ: ದಿಢೀರ್ ನಿಲ್ಲಿಸಿದ ಬಸ್‌ಗೆ ಟಿ ಟಿ ವಾಹನ ಡಿಕ್ಕಿ

0

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ಸೊಂದನ್ನು ಹಠಾತ್ತನೆ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟೆಂಪೋಟ್ರಾವೆಲ್ (ಟಿ ಟಿ) ವಾಹನ ಬಸ್ಸಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಕುಂಬ್ರದಲ್ಲಿ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ಸು ಕುಂಬ್ರ ಶಾಲಾ ಮುಖ್ಯ ದ್ವಾರದ ಬಳಿ ಬರುತ್ತಿದ್ದಂತೆ ಹಠಾತ್ತನೆ ಬ್ರೇಕ್ ಹಾಕಿ ನಿಲ್ಲಿಸಿ ಒಬ್ಬ ಪ್ರಯಾಣಿಕನನ್ನು ಇಳಿಸಿದ್ದಾರೆ. ಅದೇ ವೇಳೆ ಹಿಂದಿನಿಂದ ಬಂದ ಟಿ ಟಿ ವಾಹನ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಟಿ ಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಟಿ ಟಿ ಮತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಟೆಂಪೋ ವಾಹನ ಮೈಸೂರಿನಿಂದ ಪುತ್ತೂರು ಕಡೆ ತೆರಳುತ್ತಿತ್ತು.

 

LEAVE A REPLY

Please enter your comment!
Please enter your name here