ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ., ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಕುಡಿಪಾಡಿ ಸಹಯೋಗದಲ್ಲಿ ಇತ್ತೀಚೆಗೆ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಪ್ರೇರಣಾ-ಮಕ್ಕಳ ಉಚಿತ ಶೈಕ್ಷಣಿಕ ಪ್ರವಾಸದ ಉದ್ಘಾಟನೆಯು ಜರಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಸಮನ್ವಯಾಧಿಕಾರಿ ನವೀನ್ ವೇಗಸ್, ಮಾಜಿ ಸೈನಿಕ ಜಯರಾಮ್ ಕುಡಿಪಾಡಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್‌ನ ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬೇರೆ ಬೇರೆ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು. ನಿವೃತ್ತ ಸೈನಿಕ ಜಯರಾಮ್ ಇವರಿಗೆ ಶಾಲಾ ವತಿಯಿಂದ ಸನ್ಮಾನವನ್ನು ಮಾಡಲಾಯಿತು.
ಪ್ರೇರಣಾ ಮಕ್ಕಳ ಉಚಿತ ಶೈಕ್ಷಣಿಕ ಪ್ರವಾಸದ ಉದ್ಘಾಟನೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್‌ರವರು ನೆರವೇರಿಸಿ ಮಾತನಾಡಿ, ಮಕ್ಕಳಿಗೆ ಮೊಬೈಲ್ ಬಳಕೆ ಆದಷ್ಟು ಕಡಿಮೆ ಮಾಡಬೇಕು, ಈ ನಿಟ್ಟಿನಲ್ಲಿ ಪೋಷಕರು ಕಾಳಜಿ ವಹಿಸಬೇಕು ಎಂದರು. ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಪ್ರಭಾ ಎಸ್ ಶಾಲಾ ವರದಿಯನ್ನು ಓದಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್ ವಂದಿಸಿದರು. ಗಣೇಶ್ ಎಸ್. ಕಾರ್‍ಯಕ್ರಮ ನಿರೂಪಿಸದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳಿಂದ ಮತ್ತು ಕುಡಿಪಾಡಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವಿನೋದಾವಳಿಗಳು ನಡೆಯಿತು.