ಡಿ.3; ಬೆಟ್ಟಂಪಾಡಿ ಪ್ರೀಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡೋತ್ಸವ

0

 ನಿಡ್ಪಳ್ಳಿ; ಬೆಟ್ಟಂಪಾಡಿ ಪ್ರೀಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ 2022 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಡಿ.3 ರಂದು ಬೆಟ್ಟಂಪಾಡಿ ಬಿಲ್ವಗಿರಿ ಕ್ರೀಡಾಂಗಣದಲ್ಲಿ ನಡೆಯಲಿದೆ.
 ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಕೆ.ರಾಮ ಕ್ರೀಡಾಕೂಟ ಉದ್ಘಾಟಿಸಲಿರುವರು. ಪ್ರೀಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಅಧ್ಯಕ್ಷತೆ ವಹಿಸಲಿರುವರು. ಪಾಣಾಜೆ ಸುಬೋಧ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ರೈ ಧ್ವಜಾರೋಹಣ ನೆರವೇರಿಸಲಿರುವರು.ಬೆಟ್ಟಂಪಾಡಿ ನವೋದಯ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ.ಎಸ್ ದ್ವಜ ವಂದನೆ ಸ್ವೀಕರಿಸಲಿರುವರು.ಉದ್ಯಮಿ ಉಮೇಶ್ ರೈ ಗಿಳಿಯಾಲು ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಸದಾನಂದ ಮಣಿಯಾಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಶಾಲಾ ಮುಖ್ಯ ಗುರು ರಾಜೇಶ್ ನೆಲ್ಲಿತ್ತಡ್ಕ  ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here